ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ಅವಲಂಬಿತ 25 ಲಕ್ಷ ಮಂದಿಗೆ ಅನುಕೂಲವಾಗುವಂತೆ ಕ್ಯಾಶ್ ಲೆಸ್ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗುವುದು.
ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರುವ ಕಾಲ ಕೂಡಿಬಂದಿದೆ. ನಗದು ರಹಿತ ಚಿಕಿತ್ಸೆ ನೀಡುವ ಯೋಜನೆಗೆ ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಗುವ ಸಾಧ್ಯತೆ ಇದ್ದು, ಇದರಿಂದ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬದ 25 ಲಕ್ಷ ಸದಸ್ಯರಿಗೆ ಕ್ಯಾಶ್ ಲೆಸ್ ಚಿಕಿತ್ಸೆ ಸೌಲಭ್ಯ ದೊರೆಯಲಿದೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಈ ಬಗ್ಗೆ ಮಾಹಿತಿ ನೀಡಿದ್ದು, ನೌಕರರ ಬೇಡಿಕೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈಡೇರಿಸುವ ಭರವಸೆ ನೀಡಿದ್ದರು. ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ಸಿಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.