ಮಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಮಣಿಪಾಲ ಕೆಎಂಸಿ ವೈದ್ಯರು ಸೇರಿದಂತೆ ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಮಂಗಳೂರಿನ ಯೆನೆಪೋಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.
ಹಿರಿಯ ಕಾಂಗ್ರೆಸ್ ನಾಯಕ ಜನಾರ್ಧನ ಪೂಜಾರಿ, ಮಾಜಿ ಸಚಿವ ಎಂ.ಬಿ. ಪಾಟೀಲ ಮೊದಲಾದವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಆಸ್ಕರ್ ಫರ್ನಾಂಡಿಸ್ ಕುಟುಂಬದವರೊಂದಿಗೆ ಚರ್ಚೆ ನಡೆಸಿ ಆರೋಗ್ಯ ವಿಚಾರಿಸಿದ್ದಾರೆ. ಪೇಜಾವರ ಸ್ವಾಮೀಜಿ ಅವರೂ ಆರೋಗ್ಯ ವಿಚಾರಿಸಿದ್ದಾರೆ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.
ಅನಾರೋಗ್ಯದ ನಡುವೆಯೂ ಆಸ್ಪತ್ರೆಗೆ ಭೇಟಿ ನೀಡಿ ಆಸ್ಕರ್ ಫರ್ನಾಂಡೀಸ್ ಆರೋಗ್ಯ ವಿಚಾರಿಸಿದ ಜನಾರ್ಧನ ಪೂಜಾರಿ ಚಿಕಿತ್ಸೆಯ ನಂತರ ಅವರು ಆರೋಗ್ಯವಾಗಿ ಬರಲಿದ್ದಾರೆ ಎಂದು ಭಾವುಕರಾಗಿ ಕಣ್ಣೀರು ಹಾಕಿದ್ದಾರೆ.