ನವದೆಹಲಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮೊದಲ ಬಾರಿ ಮೌನ ಮುರಿದಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ, ಪಕ್ಷದ ಸೂಚನೆಯಂತೆ ನಾನು ಕೆಲಸ ಮಾಡುವುದಾಗಿ ತಿಳಿಸಿದ್ದಾರೆ. ಸಿಎಂ ಹೇಳಿಕೆ ಬೆನ್ನಲ್ಲೇ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಯಾವುದೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
ಇಷ್ಟು ದಿನ ಸಿಎಂ ಯಡಿಯೂರಪ್ಪನವರ ರಾಜೀನಾಮೆ ಇಲ್ಲ, ಅನಗತ್ಯ ಗೊಂದಲ ಬೇಡ ಎಂದು ಹೇಳಿಕೆ ನೀಡುತ್ತಿದ್ದ ಅರುಣ್ ಸಿಂಗ್ ಇಂದು ಮಾಧ್ಯಮದವರ ಯಾವುದೇ ಪ್ರಶ್ನೆಗಳಿಗೂ ಉತ್ತರಿಸಲು ನಿರಾಕರಿಸಿದ್ದಾರೆ. ಯಡಿಯೂರಪ್ಪ ರಾಜೀನಾಮೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಸಿದ್ಧರಿಲ್ಲ. ಮುಂದೊಂದು ದಿನ ಎಲ್ಲರೂ ಸೇರಿ ಟೀ ಕುಡಿಯೋಣ ಎಂದಷ್ಟೇ ಹೇಳಿ ತೆರಳಿದ್ದಾರೆ.
ಈ ವಿಶೇಷತೆಗಳಿಗೆ ಸಾಕ್ಷಿಯಾಗಲಿದೆ ಟೋಕಿಯೊ ಒಲಂಪಿಕ್ಸ್
ಒಟ್ಟಾರೆ ರಾಜ್ಯ ರಾಜಕಾರಣ ಕ್ಷಣ ಕ್ಷಣಕ್ಕು ಕುತೂಹಲಕ್ಕೆ ಕಾರಣವಾಗಿದ್ದು, ಜುಲೈ 26ಕ್ಕೆ ರಾಜ್ಯ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಪೂರೈಸುತ್ತಿದ್ದು, ಅಂದೇ ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡುತ್ತಾರಾ? ಅಥವಾ ರಾಜೀನಾಮೆ ಬಗ್ಗೆ ಯಾವುದೇ ಪ್ರಸ್ತಾಪವನ್ನೂ ಮಾಡದೇ 2 ವರ್ಷ ಪೂರೈಕೆ ಕಾರ್ಯಕ್ರಮಗಳು, ಸರ್ಕಾರದ ಹೊಸ ಯೋಜನೆಗಳ ಬಗ್ಗೆ ಮಾತ್ರ ಪ್ರಸ್ತಾಪವಾಗಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ. ಒಟ್ಟಿನಲ್ಲಿ ಬಿಜೆಪಿ ಹೈಕಮಾಂಡ್ ವಲಯದಲ್ಲಿ ನಡೆಯುತ್ತಿರುವುದಾದರೂ ಏನು? ಎಂಬುದು ಯಾರಿಗೂ ಸ್ಪಷ್ಟತೆ ಇಲ್ಲದಂತಾಗಿದೆ.