ಮುಂಬೈ: ಮಹಾನಗರ ಮುಂಬೈನಲ್ಲಿ ಕಳೆದ 4 ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಸತತ ಮಳೆಯ ಪರಿಣಾಮ ಜನ-ಜೀವನ ಅಸ್ತವ್ಯಸ್ತಗೊಂಡಿದೆ. ಹವಮಾನ ಇಲಾಖೆಯ ಪ್ರಕಾರ ಮುಂಬೈ ಹಾಗೂ ಉಪನಗರಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಮಹಾರಾಷ್ಟ್ರದ ಪೂರ್ವ ವಿದರ್ಭ ಪ್ರದೇಶಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಭಾರಿ ಮಳೆಯ ಪರಿಣಾಮ ಮುಂಬೈನ ಹಲವಾರು ಭಾಗಗಳು ಜಲಾವೃತಗೊಂಡಿದೆ. ಇದರಿಂದ ಮುಂಬೈನ ಉಂಬರ್ಮಾಲಿ ಹಾಗೂ ಕಸರ ನಡುವಿನ ಸ್ಥಳೀಯ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಭಾರಿ ಮಳೆಯಿಂದಾಗಿ ಹಳಿಗಳಲ್ಲಿ ನೀರು ಹರಿಯುತ್ತಿರುವ ಪರಿಣಾಮ ಸ್ಥಳೀಯ ರೈಲು ಸೇವೆಯನ್ನು ತಾತ್ಕಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮುಂಬೈ, ಪಾಲ್ಘರ್, ಥಾಣೆ ಹಾಗೂ ರಾಯಘಡ್ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೋವಿಡ್ ಸೋಂಕಿಗೆ ಏರ್ ಇಂಡಿಯಾದ 56 ಸಿಬ್ಬಂದಿ ಬಲಿ…..!
ದೇಶದ ಪಶ್ಚಿಮ ಹಾಗೂ ಮಧ್ಯ ಭಾಗಗಳಲ್ಲಿ ಮುಂದಿನ 3-4 ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬೈ ಜೊತೆಗೆ ಗೋವಾ, ಕೊಂಕಣ, ಮಧ್ಯ ಮಹಾರಾಷ್ಟ್ರದ ಮರಾಠವಾಡ ಪ್ರದೇಶದಲ್ಲೂ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.