ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೈಕಮಾಂಡ್ ನಿರ್ಧಾರಕ್ಕೆ ಬದ್ಧವೆಂದು ಹೇಳಿದ್ದು, ಈ ಮೂಲಕ ರಾಜೀನಾಮೆ ಸುಳಿವು ನೀಡಿದ್ದಾರೆ. ಯಡಿಯೂರಪ್ಪ ಅವರ ನಂತರ ಹೈಕಮಾಂಡ್ ಯಾರಿಗೆ ನಾಯಕತ್ವ ವಹಿಸಲಿದೆ ಎಂಬ ಚರ್ಚೆಯೂ ನಡೆದಿದ್ದು, ಅನೇಕರ ಹೆಸರು ಕೇಳಿಬಂದಿವೆ.
ಇದೇ ವೇಳೆ ಇಂತಹವರನ್ನೇ ಸಿಎಂ ಮಾಡಬೇಕೆಂದು ಕೆಲವು ನಾಯಕರ ಹೆಸರನ್ನು ಅನೇಕ ಸ್ವಾಮೀಜಿಗಳು ಪ್ರಸ್ತಾಪಿಸಿದ್ದಾರೆ. ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಿದರೆ ಸಚಿವ ಬಿ. ಶ್ರೀರಾಮುಲು ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಬ್ರಹ್ಮಾನಂದ ಸ್ವಾಮೀಜಿ ಹೇಳಿದ್ದಾರೆ.
ಮುಖ್ಯಮಂತ್ರಿ ನಿವಾಸ ‘ಕಾವೇರಿ’ಯಲ್ಲಿ ಮಾತನಾಡಿದ ದೊಡ್ಡಬಳ್ಳಾಪುರದ ವಾಲ್ಮೀಕಿ ಮಠದ ಬ್ರಹ್ಮಾನಂದ ಸ್ವಾಮೀಜಿ ಅವರು, ಯಡಿಯೂರಪ್ಪರನ್ನು ಬದಲಾಯಿಸಿದ್ರೆ ಶ್ರೀರಾಮುಲು ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ತಿಳಿಸಿದ್ದಾರೆ.