ಹಾಸನ -ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಕಲೇಶಪುರ ಸಮೀಪದ ದೋಣಿಗಲ್ ಬಳಿ ಭೂ ಕುಸಿತ ಉಂಟಾಗಿದೆ.
ಕುಸಿತ ತಡೆದು ಸಂಚಾರ ಮಾರ್ಗವನ್ನು ತುರ್ತಾಗಿ ದುರಸ್ತಿಪಡಿಸುವಂತೆ ಹಾಸನ ಜಿಲ್ಲಾಧಿಕಾರಿ ಆರ್. ಗಿರಿಶ್ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ತಹಶಿಲ್ದಾರ್ ಜಯಕುಮಾರ್ ಸೇರಿದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತಕ್ಷಣದ ಪರಿಹಾರ ಕಾರ್ಯಗಳಿಗೆ ಕ್ರಮ ವಹಿಸಿದ್ದಾರೆ.
ದುರಸ್ತಿ ಉದ್ದೇಶಗಳಿಂದ ರಸ್ತೆ ಮಾರ್ಗ ತಾತ್ಕಾಲಿಕ ಬಂದ್ ಆಗಲಿದ್ದು, ಪ್ರಯಾಣಿಕರು ಬದಲಿ ಮಾರ್ಗದಲ್ಲಿ ತೆರಳುವಂತೆ ಕೋರಲಾಗಿದೆ.