ಬೆಳಗಾವಿ: ಮರಾಷ್ಟ್ರದ ಪಶ್ಚಿಮ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಪರಿಣಾಮ ಕೃಷ್ಣಾ ನದಿಗೆ ನೀರು ಹರಿಬಿಡಲಾಗುತ್ತಿದ್ದು, ಇದರಿಂದಾಗಿ ಬೆಳಗಾವಿ ಜಿಲ್ಲೆಗಳ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ.
ರೈತನೊಬ್ಬ ತೋಟದ ಮನೆಗೆ ಹೋಗಿದ್ದ ವೇಳೆ ಪಾಂಡ್ರಿ ನದಿಯ ಪ್ರವಾಹದಲ್ಲಿ ಸಿಲುಕಿಕೊಂಡಿದ್ದು, ನಿನ್ನೆಯಿಂದ ರಕ್ಷಣೆಗಾಗಿ ಮೊರೆಯಿಟ್ಟಿದ್ದ, ಇದೀಗ ಎಸ್ ಡಿ ಆರ್ ಎಫ್ ತಂಡ ಹಾಗೂ ಪೊಲೀಸರ ನೆರವಿನಿಂದ ರೈತನನ್ನು ರಕ್ಷಿಸಲಾಗಿದೆ. ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಲೋಂಡಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಮಹಾರಾಷ್ಟ್ರದಲ್ಲಿ ಭಾರಿ ಮಳೆಯಿಂದಾಗಿ ಪಾಂಡ್ರಿ ನದಿಯಲ್ಲಿ ಪ್ರವಾಹ ಭೀತಿ ಉಂಟಾಗಿದೆ. ಇನ್ನೊಂದೆಡೆ ಕೃಷ್ಣಾ ನದಿಯಲ್ಲಿ ಒಳ ಹರಿವು ಹೆಚ್ಚಾಗಿದ್ದು, ಕ್ಷಣ ಕ್ಷಣಕ್ಕೂ ಪ್ರವಾಹದ ಆತಂಕ ಹೆಚ್ಚುತ್ತಿದ್ದು, ನದಿ ಪಾತ್ರದ ಜನರನ್ನು ಜಿಲ್ಲಾಡಳಿತ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುತ್ತಿದೆ.