ಕೊರೊನಾ ಮೂರನೇ ಅಲೆ ಭಯದ ಮಧ್ಯೆ ಏಮ್ಸ್ ನಿರ್ದೇಶಕ ರಂದೀಪ್ ಗುಲೇರಿಯಾರಿಂದ ಭರವಸೆಯೊಂದು ಸಿಕ್ಕಿದೆ. ಮಕ್ಕಳಿಗೆ ಕೊರೊನಾ ಲಸಿಕೆ ಸೆಪ್ಟೆಂಬರ್ ವೇಳೆಗೆ ಸಿಗಲಿದೆ ಎಂದವರು ಮಾಹಿತಿ ನೀಡಿದ್ದಾರೆ. ಈವರೆಗೆ ಭಾರತದಲ್ಲಿ 42 ಕೋಟಿಗೂ ಹೆಚ್ಚು ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಈ ವರ್ಷದ ಅಂತ್ಯದ ವೇಳೆಗೆ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕುವ ಗುರಿಯನ್ನು ಸರ್ಕಾರ ನಿಗದಿಪಡಿಸಿದೆ.
ಕೊರೊನಾ ವೈರಸ್ ಎರಡನೇ ಅಲೆ ಇನ್ನೂ ಕಡಿಮೆಯಾಗಿಲ್ಲ. ಆಗ್ಲೇ ಮೂರನೇ ಅಲೆ ಬಗ್ಗೆ ಚರ್ಚೆಯಾಗ್ತಿದೆ. ಈಗಾಗಲೇ ಮೂರನೇ ಅಲೆ ಶುರುವಾಗಿದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ವರದಿ ಪ್ರಕಾರ ಕೊರೊನಾದ ಮೂರನೇ ಅಲೆ, ಮಕ್ಕಳಿಗೆ ಅಪಾಯಕಾರಿ ಎನ್ನಲಾಗ್ತಿದೆ. ಮಕ್ಕಳಿಗೆ ಕೊರೊನಾ ಲಸಿಕೆ ಬಂದಲ್ಲಿ, ಸೋಂಕಿನ ಸರಪಳಿಯನ್ನು ಮುರಿಯುವಲ್ಲಿ ಇದು ಪ್ರಮುಖ ಹೆಜ್ಜೆಯಾಗಲಿದೆ ಎಂದು ಡಾ.ರಂದೀಪ್ ಗುಲೇರಿಯಾ ಹೇಳಿದ್ದಾರೆ.
ಜೈಡಿಸ್ ಕ್ಯಾಂಡಿಲಾ, ಮಕ್ಕಳ ಕೊರೊನಾ ಲಸಿಕೆ ಪ್ರಯೋಗವನ್ನು ಪೂರ್ಣಗೊಳಿಸಿದೆ. ತುರ್ತು ಬಳಕೆಗೆ ಅನುಮೋದನೆ ಸಿಗಬೇಕಿದೆ. ಭಾರತ್ ಬಯೋಟಿಕ್ ಸಿದ್ಧಪಡಿಸಿರುವ ಕೋವ್ಯಾಕ್ಸಿನ್ ಲಸಿಕೆ ಪ್ರಯೋಗ ಕೂಡ ಆಗಸ್ಟ್-ಸೆಪ್ಟೆಂಬರ್ ಒಳಗೆ ಪೂರ್ಣಗೊಳ್ಳಲಿದೆ ಎಂದು ಗುಲೇರಿಯಾ ಹೇಳಿದ್ದಾರೆ.
ಫಿಜರ್ ಸಿದ್ಧಪಡಿಸಿದ ಮಕ್ಕಳ ಲಸಿಕೆಗೆ ಅಮೆರಿಕಾ ಈಗಾಗಲೇ ಒಪ್ಪಿಗೆ ನೀಡಿದೆ. ಸೆಪ್ಟೆಂಬರ್ ವೇಳೆಗೆ ಮಕ್ಕಳ ಲಸಿಕೆ ಅಭಿಯಾನ ಶುರುವಾಗುವ ಸಾಧ್ಯತೆಯಿದೆ.