ಹಾಸನ: ನಾಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೆರೆಹಾನಿ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸದ್ದಾರೆ ಎಂದು ದೋಣಿಗಲ್ ನಲ್ಲಿ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಮುಖ್ಯಮಂತ್ರಿಗಳು, ನಾನು ವೈಮಾನಿಕ ಸಮೀಕ್ಷೆಗೆ ತೆರಳುತ್ತಿದ್ದೇವೆ. ಬೆಳಗಾವಿ ಜಿಲ್ಲೆ ಹೆಚ್ಚು ಅನಾಹುತವಾಗಿರುವ ಪ್ರದೇಶವಾಗಿದ್ದು, ಹೀಗಾಗಿ ವೈಮಾನಿಕ ಸಮೀಕ್ಷೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.
ರಜೆ ತೆಗೆದುಕೊಳ್ಳದಂತೆ ಅಧಿಕಾರಿಗಳಿಗೆ ತಿಳಿಸಲಾಗಿದ್ದು, ಆಯಾ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿಯೇ ಇರಬೇಕು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಪ್ರವಾಹ ನಿರ್ವಹಣೆಗೆ 950 ಕೋಟಿ ರೂಪಾಯಿ ಹಣ ಇದ್ದು, ಎಲ್ಲ ಡಿಸಿಗಳ ಖಾತೆಗೆ ಹಣ ಹಾಕಲಾಗಿದೆ ಎಂದು ಅಶೋಕ್ ತಿಳಿಸಿದ್ದಾರೆ.