ಟೊಕಿಯೋ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಭಾರತದ ಮೀರಾಬಾಯಿ ಚಾನು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಎಷ್ಟು ಸಂತೋಷವಾಗುತ್ತಿದೆ ಎಂದರೆ ಅದನ್ನು ಹೇಳಲು ಪದಗಳೇ ಸಾಕಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.
ವೇಯ್ಡ್ ಲಿಫ್ಟಿಂಗ್ ನಲ್ಲಿ ಬೆಳ್ಳಿಪದಕ ಜಯಿಸಿದ ಮೀರಾಬಾಯಿ ಚಾನು, ಪದಕ ಗೆಲ್ಲಲು ಬಹಳ ಶ್ರಮ ಪಟ್ಟಿದ್ದೇನೆ. ತ್ಯಾಗ ಮಾಡಿದ್ದೇನೆ. ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದ ನಂತರ ನನಗೆ ಆಗುತ್ತಿರುವ ಸಂತೋಷವನ್ನು ಹೇಳಿಕೊಳ್ಳಲು ಆಗುತ್ತಿಲ್ಲ. ಪದಗಳೇ ಇಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.
ಎರಡು ದಶಕದ ಹಿಂದೆ ಭಾರತದ ಕರ್ಣಂ ಮಲ್ಲೇಶ್ವರಿ ವೇಯ್ಡ್ ಲಿಫ್ಟಿಂಗ್ ನಲ್ಲಿ ಪದಕ ಗಳಿಸಿದ್ದರು. ಭಾರತೀಯರಿಗೆ ಒಲಂಪಿಕ್ಸ್ ಕ್ರೀಡಾಕೂಟದ ಮೊದಲ ದಿನವೇ ಖುಷಿ ಸುದ್ದಿ ತಂದ ಮೀರಾಬಾಯಿ ಚಾನು ಬೆಳ್ಳಿ ಪದಕ ಗಳಿಸಿದ್ದು, ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ.