ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ರೋಚಕ ತಿರುವು ಪಡೆದುಕೊಂಡಿದ್ದು, ನಾಯಕತ್ವ ಬದಲಾವಣೆ ಇಲ್ಲವೆಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೇ ಸ್ಪಷ್ಟಪಡಿಸಿದ್ದಾರೆ.
ಗೋವಾದಲ್ಲಿ ಮಾತನಾಡಿದ ಜೆ.ಪಿ. ನಡ್ಡಾ, ಯಡಿಯೂರಪ್ಪ ಕಾರ್ಯವೈಖರಿಯನ್ನು ಹಾಡಿಹೊಗಳಿದ್ದಾರೆ. ಯಡಿಯೂರಪ್ಪನವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಎರಡು ವರ್ಷ ಕರ್ನಾಟಕದಲ್ಲಿ ಉತ್ತಮ ಆಡಳಿತ ನೀಡಿದ್ದಾರೆ. ಅವರನ್ನು ಬದಲಾವಣೆ ಮಾಡಲಾಗುವುದು ಎಂದು ಎಲ್ಲಿಯೂ ಹೇಳಿಲ್ಲ ಎಂದು ಹೇಳಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಗೊಂದಲಗಳಿಗೆ ತೆರೆ ಬಿದ್ದಿದೆ. ಇನ್ನು ಉಳಿದ ಅವಧಿಗೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಹೇಳಲಾಗಿದೆ.