ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಕೃಷಿ ಸಚಿವ ಬಿ.ಸಿ. ಪಾಟೀಲ್, ಯಡಿಯೂರಪ್ಪ ಸೇವೆ ರಾಜ್ಯಕ್ಕೆ ಇನ್ನೂ ಅಗತ್ಯವಿತ್ತು. ಅವರ ರಾಜೀನಾಮೆ ನಿರ್ಧಾರ ಬೇಸರ ತಂದಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ. ಪಾಟೀಲ್, ಓರ್ವ ಬಿಜೆಪಿ ಕಾರ್ಯಕರ್ತನಾಗಿ ಯಡಿಯೂರಪ್ಪ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ. ರಾಷ್ಟ್ರೀಯ ಪಕ್ಷವಾಗಿದ್ದರಿಂದ ಪಕ್ಷಕ್ಕೆ ಅದರದ್ದೆ ಆದ ತತ್ವ, ಸಿದ್ಧಾಂತಗಳಿವೆ. ವರಿಷ್ಠರು ನೀಡಿದ ಸೂಚನೆಯಂತೆ ಯಡಿಯೂರಪ್ಪ ನಡೆದುಕೊಂಡಿದ್ದಾರೆ ಎಂದರು.
ದುಡಿಮೆ ಮಹತ್ವ ತಿಳಿಸಲು ಮಕ್ಕಳಿಗೆ ಟ್ರಕ್ ಖರೀದಿಸಿಕೊಟ್ಟ ತಂದೆ
ಸಿಎಂ ರಾಜೀನಾಮೆ ಬೆನ್ನಲ್ಲೇ ವಲಸಿಗ ಸಚಿವರ ನಡೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪಕ್ಷದಲ್ಲಿ ವಲಸಿಗರು ಎಂಬ ಪ್ರಶ್ನೆ ಉದ್ಭವಿಸಲ್ಲ. ನಾವು ಯಾವುದೇ ವೈಯಕ್ತಿಕ ನಿರ್ಧಾರಗಳನ್ನು ಕೈಗೊಳ್ಳಲ್ಲ. ಹೈಕಮಾಂಡ್ ಏನು ನಿರ್ಧಾರ ಕೈಗೊಳ್ಳುತ್ತೆ ಅದಕ್ಕೆ ನಾವೆಲ್ಲರೂ ಬದ್ಧರು. ನಾವು ಬಂದ ಮೇಲೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಯಿತು. ಯಡಿಯೂರಪ್ಪ ನಮಗೆ ಕೊಟ್ಟ ಮಾತಿನಂತೆ ಮಂತ್ರಿ ಸ್ಥಾನವನ್ನು ನೀಡಿ ಮನೆ ಮಕ್ಕಳಂತೆ ನಮ್ಮನ್ನು ನಡೆಸಿಕೊಂಡಿದ್ದಾರೆ. ಸಿಎಂ ಆಗಿ ರಾಜ್ಯಕ್ಕೆ ಅವರ ಸೇವೆ ಇನ್ನೂ ಅಗತ್ಯವಿತ್ತು. ಮುಂದೆ ಪಕ್ಷ ಕೂಡ ನಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತೆ ಎಂಬ ವಿಶ್ವಾಸವಿದೆ. ಪಕ್ಷದ ಸೂಚನೆಯಂತೆ ಕೆಲಸ ಮಾಡುತ್ತೇವೆ ಎಂದು ಹೇಳಿದರು.