ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 29,689 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಕಳೆದ 24 ಗಂಟೆಯಲ್ಲಿ 415 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 421382ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 398100 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 42363 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 30621469 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ ದೇಶದಲ್ಲಿ 17,20,110 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ. 24ಗಂಟೆಯಲ್ಲಿ 66,03,112 ಜನರಿಗೆ ಲಸಿಕೆ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 44,19,12,395 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.