ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಮೊದಲ ದಿನವೇ ಸಿಎಂ ಬಸವರಾಜ್ ಬೊಮ್ಮಾಯಿ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಬೊಮ್ಮಾಯಿ, ರೈತರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಈ ಹಿನ್ನೆಲೆಯಲ್ಲಿ ರೈತ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಹೊಸ ಶಿಷ್ಯ ವೇತನ ಘೋಷಣೆ ಮಾಡಲಾಗಿದೆ ಎಂದರು.
BIG NEWS: ಸೂಪರ್ ಸಿಎಂ ಟ್ಯಾಗ್ ನಿಂದ ಹೊರ ಬಂದಿದ್ದಕ್ಕೆ ಖುಷಿಯಾಗಿದೆ ಎಂದ ಬಿ.ವೈ. ವಿಜಯೇಂದ್ರ
ರೈತರ ಮಕ್ಕಳ ಶಿಕ್ಷಣಕ್ಕಾಗಿ ಶಿಷ್ಯ ವೇತನ ಜಾರಿ
ಸಂಧ್ಯಾ ಸುರಕ್ಷಾ ಯೋಜನೆ ಹಣ 1000 ರೂಪಾಯಿಯಿಂದ 1200 ರೂಪಾಯಿಗೆ ಹೆಚ್ಚಳ
ವಿದವಾವೇತನ 600ರಿಂದ 800 ರೂಗೆ ಹೆಚ್ಚಳ
ಶೇ.60-75ರಷ್ಟು ಅಂಗವಿಕಲವಿರುವವರಿಗೆ ಅಂಗವಿಕಲರ ವೇತನ ಯೋಜನೆಯಡಿ 600-800ರೂ ಗೆ ಹೆಚ್ಚಳ ಸೇರಿದಂತೆ ಹಲವು ಯೋಜನೆಗಳನ್ನು ಘೋಷಣೆ ಮಾಡಿದರು.