alex Certify BIG NEWS: ಕ್ಯಾಬಿನೆಟ್ ರಚನೆಗೆ ಮುಹೂರ್ತ ಫಿಕ್ಸ್…? ಗುರುವಾರ ನೂತನ ಸಚಿವರ ಪ್ರಮಾಣ ವಚನ….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕ್ಯಾಬಿನೆಟ್ ರಚನೆಗೆ ಮುಹೂರ್ತ ಫಿಕ್ಸ್…? ಗುರುವಾರ ನೂತನ ಸಚಿವರ ಪ್ರಮಾಣ ವಚನ….?

ಬೆಂಗಳೂರು: ಮಂತ್ರಿಗಿರಿಗಾಗಿ ನಾಯಕರ ಕಸರತ್ತು, ಸಿಎಂ ಬೊಮ್ಮಾಯಿ ದೆಹಲಿ ಪ್ರಯಾಣ, ಹೈಕಮಾಂಡ್ ಭೇಟಿ ಬೆನ್ನಲ್ಲೇ ಸಚಿವ ಸಂಪುಟ ರಚನೆ ಚಟುವಟಿಕೆಗಳು ಗರಿಗೆದರಿದ್ದು, ಮುಂದಿನ ವಾರ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಬಹುತೇಕ ಖಚಿತವಾಗಿದೆ.

ಸಿಎಂ ಆದ ಬಳಿಕ ಮೊದಲ ಬಾರಿ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗಿರುವ ಬಸವರಾಜ್ ಬೊಮ್ಮಾಯಿ, ಸಂಪುಟಕ್ಕೆ ಸೇರ್ಪಡೆಯಾಗುವವರ ಪಟ್ಟಿಯನ್ನು ತೆಗೆದುಕೊಂಡು ಹೋಗಿದ್ದರು ಎನ್ನಲಾಗಿದೆ. ಬೊಮ್ಮಾಯಿ ತೆಗೆದುಕೊಂಡು ಹೋಗಿದ್ದ 21 ಜನರ ಲಿಸ್ಟ್ ನಲ್ಲಿ ಕೇವಲ 6 ಜನರ ಹೆಸರನ್ನು ಮಾತ್ರ ಹೈಕಮಾಂಡ್ ಫೈನಲ್ ಮಾಡಿದ್ದು, ಸೋಮವಾರ ಮತ್ತೊಮ್ಮೆ ದೆಹಲಿಗೆ ಬರುವಂತೆ ಸಿಎಂ ಗೆ ಸೂಚಿಸಿದೆ. ಹಾಗಾಗಿ ಸೋಮವಾರ ಸಿಎಂ ಬೊಮ್ಮಾಯಿ ಮತ್ತೊಮ್ಮೆ ದೆಹಲಿಗೆ ತೆರಳಲಿದ್ದು, ಈ ವೇಳೆ ಉಳಿದ ಸಚಿವರ ಪಟ್ಟಿ ಫೈನಲ್ ಆಗಲಿದೆ ಎನ್ನಲಾಗಿದೆ.

ಈ ನಡುವೆ ಸಂಪುಟ ರಚನೆ ವಿಚಾರವಾಗಿ ದೆಹಲಿಯಲ್ಲಿ ಮಾತನಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಜೆ.ಪಿ.ನಡ್ಡಾ ಯಾವುದೋ ಸಭೆಯಲ್ಲಿ ನಿರತರಾಗಿದ್ದಾರೆ. ಸಭೆ ಬಳಿಕ ಅವರೊಂದಿಗೆ ಚರ್ಚಿಸಿ ನಿರ್ಧರಿಸುತ್ತೇನೆ ಎಂದಿದ್ದಾರೆ. ಒಂದೇ ಹಂತದಲ್ಲಿ ಕ್ಯಾಬಿನೆಟ್ ವಿಸ್ತರಣೆಗೆ ಹೈಕಮಾಂಡ್ ಚಿಂತನೆ ನಡೆಸಿದ್ದು, ನೂತನ ಸಚಿವರು ಗುರುವಾರ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...