alex Certify BIG NEWS: ಕೇರಳದಲ್ಲಿ 3ನೇ ಅಲೆ ಸ್ಫೋಟ; ಆಗಸ್ಟ್ ನಲ್ಲಿ ರಾಜ್ಯಕ್ಕೂ ಅಪ್ಪಳಿಸುವ ಭೀತಿ; ಈಗಲಾದರೂ ಮುಂಜಾಗೃತೆ ಕೈಗೊಳ್ಳಿ; ಸರ್ಕಾರಕ್ಕೆ HDK ಸಲಹೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೇರಳದಲ್ಲಿ 3ನೇ ಅಲೆ ಸ್ಫೋಟ; ಆಗಸ್ಟ್ ನಲ್ಲಿ ರಾಜ್ಯಕ್ಕೂ ಅಪ್ಪಳಿಸುವ ಭೀತಿ; ಈಗಲಾದರೂ ಮುಂಜಾಗೃತೆ ಕೈಗೊಳ್ಳಿ; ಸರ್ಕಾರಕ್ಕೆ HDK ಸಲಹೆ

ಯಾವುದೇ ರಾಜಕೀಯ ಪ್ರಭಾವಕ್ಕೆ ಒಳಗಾಗದೇ ನ್ಯಾಯಯುತ ತನಿಖೆ ನಡೆಸಲಿ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ... - Just Kannada | Online Kannada News | Breaking Kannada News | Karnataka News | Live ...

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಕೊರೊನಾ 3ನೇ ಅಲೆ ಭೀತಿ ಎದುರಾಗಿದೆ ಮತ್ತೊಂದೆಡೆ ಪ್ರವಾಹದಿಂದಾಗಿ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಸಂಪುಟ ರಚನೆಯತ್ತ ಗಮನಕೊಟ್ಟಿದ್ದಾರೆ. ಶಾಸಕರಿಗೆ ಮೊದಲು ತಮ್ಮ ತಮ್ಮ ಕ್ಷೇತ್ರಗಳಿಗೆ ತೆರಳಿ, ಜನರ ಸಮಸ್ಯೆ ಆಲಿಸುವಂತೆ ಸೂಚಿಸಲಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

BIG NEWS: ಉಪವಾಸವಾದ್ರೂ ಮಾಡಲಿ, ಊಟವಾದ್ರೂ ಮಾಡಲಿ; ಮೇಕೆದಾಟು ಅಣೆಕಟ್ಟು ನಿರ್ಮಾಣ ಶತಸಿದ್ಧ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರಿನ ಸೋಮಶೆಟ್ಟಿಹಳ್ಳಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಕೋವಿಡ್ 2ನೇ ಅಲೆ ಸಂದರ್ಭದಲ್ಲಿ ಲಾಕ್ ಡೌನ್ ಮಾಡುವಂತೆ ನಾನು ಹೇಳಿದ್ದೆ. ಆದರೆ ನಾನು ಕೊಟ್ಟ ಸಲಹೆಯನ್ನು ರಾಜ್ಯ ಸರ್ಕಾರ ನಿರ್ಲಕ್ಷ ಮಾಡಿತ್ತು. ಪರಿಣಾಮ ಅನಾಹುತಗಳನ್ನು ಎದುರಿಸಬೇಕಾಯಿತು. ಈಗ ಮೂರನೇ ಅಲೆ ಆರಂಭವಾಗುತ್ತಿದೆ ಈಗಲಾದರೂ ಸರ್ಕಾರ ಎಚ್ಚೆತ್ತು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಿ ಎಂದರು.

ನೆರೆ ರಾಜ್ಯ ಕೇರಳದಲ್ಲಿ ಕೊರೊನಾ 3ನೇ ಅಲೆ ಸ್ಫೋಟವಾಗಿದೆ. ರಾಜ್ಯದಲ್ಲೂ ಆಗಸ್ಟ್ ಮೊದಲ ಅಥವಾ ಎರಡನೇ ವಾರದಲ್ಲಿ ಮೂರನೇ ಅಲೆ ಆರಂಭವಾಗಲಿದೆ ಎಂದು ತಜ್ನರು ಎಚ್ಚರಿಸುತ್ತಿದ್ದಾರೆ. ರಾಜ್ಯದಲ್ಲಿ ಪ್ರತಿದಿನ 50-100 ಕೇಸ್ ಹೆಚ್ಚಾಗುತ್ತಿದೆ. ದೊಡ್ಡಮಟ್ಟದಲ್ಲಿ ಮೂರನೇ ಅಲೆ ಹರಡುವ ಮೊದಲು ಈಗಲೇ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ಆಗ್ರಹಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...