ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1987 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 1632 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 37 ಸೋಂಕಿತರು ಮೃತಪಟ್ಟಿದ್ದಾರೆ.
23,796 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 1.43 ರಷ್ಟು ಇದೆ. ಇಂದು 1,38,532 ಪರೀಕ್ಷೆ ನಡೆಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು 450 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 377 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, 11 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.