ಬೆಂಗಳೂರು: ಎರಡು-ಮೂರು ದಿನಗಳಲ್ಲಿ ಸಚಿವ ಸಂಪುಟದ ಪಟ್ಟಿ ಫೈನಲ್ ಆಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಷಿ ತಿಳಿಸಿದ್ದಾರೆ.
ಕೆಐಎಬಿಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಜೊತೆಗೆ ಮುಖ್ಯಮಂತ್ರಿ ಈಗಾಗಲೇ ಚರ್ಚೆ ನಡೆಸಿದ್ದಾರೆ. ಇನ್ನು ಎರಡು-ಮೂರು ದಿನಗಳಲ್ಲಿ ಪಟ್ಟಿ ಫೈನಲ್ ಆಗಲಿದೆ ಎಂದು ಅವರು ಹೇಳಿದ್ದಾರೆ.
ದೆಹಲಿ ಪ್ರವಾಸಕ್ಕೆ ತೆರಳಿದ್ದ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ರಚನೆಗೆ ಸಂಬಂಧಿಸಿದಂತೆ ಕೇಂದ್ರ ನಾಯಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಎರಡು ದಿನದೊಳಗೆ ವರಿಷ್ಠರಿಂದ ಸಂದೇಶ ಬರಲಿದೆ. ಸಾಧ್ಯವಾದರೆ ಮತ್ತೊಮ್ಮೆ ದೆಹಲಿಗೆ ಹೋಗಿ ಬರುವ ಬಗ್ಗೆಯೂ ಸಿಎಂ ಬೊಮ್ಮಾಯಿ ಹೇಳಿದ್ದು, ಶೀಘ್ರವೇ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ.