alex Certify ‘ಆರ್ ಆರ್ ಆರ್’ ಚಿತ್ರದ ಮ್ಯೂಸಿಕ್ ವಿಡಿಯೋ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಆರ್ ಆರ್ ಆರ್’ ಚಿತ್ರದ ಮ್ಯೂಸಿಕ್ ವಿಡಿಯೋ ರಿಲೀಸ್

ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರಾಮ್ ಚರಣ್ ಹಾಗೂ ಜ್ಯೂ. ಎನ್ಟಿಆರ್ ಅಭಿನಯದ ಬಹುನಿರೀಕ್ಷೆಯ ‘ಆರ್ ಆರ್ ಆರ್’ ಚಿತ್ರದ ‘ದೋಸ್ತಿ’ ಎಂಬ ಮ್ಯೂಸಿಕ್ ವಿಡಿಯೋವನ್ನು ತೆಲುಗು ಸೇರಿದಂತೆ ತಮಿಳು, ಮಲಯಾಳಂ, ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಲಹರಿ ಮ್ಯೂಸಿಕ್ ಟಿ ಸಿರೀಸ್ ಯುಟ್ಯೂಬ್ ಚಾನೆಲ್ ನಲ್ಲಿ ಇಂದು ಬಿಡುಗಡೆ ಮಾಡಲಾಗಿದೆ. ಈ ಹಾಡು ರಿಲೀಸ್ ಆದ ಕೆಲವೇ ನಿಮಿಷಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದುಕೊಂಡಿದೆ ಸ್ನೇಹಿತರ ದಿನಾಚರಣೆಯ ಪ್ರಯುಕ್ತ ಈ ಹಾಡನ್ನು ಬಿಡುಗಡೆ ಮಾಡಿದ್ದು ನಾಲ್ಕು ಭಾಷೆಗಳಲ್ಲಿ ಬೇರೆ ಬೇರೆ ಗಾಯಕರು ಈ ಹಾಡಿಗೆ ಧ್ವನಿಯಾಗಿದ್ದಾರೆ ಎಂ ಎಂ ಕೀರವಾಣಿ ಸಂಗೀತ ನೀಡಿದ್ದಾರೆ.

‘ಪ್ರೇಮಂ ಪೂಜ್ಯಂ’ ಚಿತ್ರದ ಮತ್ತೊಂದು ಹಾಡು ರಿಲೀಸ್

ರಾಜಮೌಳಿ ನಿರ್ದೇಶನದ ಈ ಚಿತ್ರವನ್ನು ಡಿ.ವಿ.ವಿ. ದಾನಯ್ಯ ತಮ್ಮ ಡಿ.ವಿ.ವಿ ಎಂಟರ್ ಟೈನ್ ಮೆಂಟ್ಸ್ ಬ್ಯಾನರ್ ನಡಿ ನಿರ್ಮಾಣ ಮಾಡಿದ್ದಾರೆ. ಆಲಿಯಾ ಭಟ್, ಅಜಯ್ ದೇವಗನ್, ಒಲಿವಿಯಾ ಮೊರಿಸ್, ಶ್ರಿಯಾ ಸರನ್, ರಾಯ್ ಸ್ಟೀವನ್ ಸನ್, ಛತ್ರಪತಿ ಶೇಖರ್, ಸೇರಿದಂತೆ ಹಲವಾರು ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಸುಮಾರು 400 ಕೋಟಿ ವೆಚ್ಚದಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...