ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅಧಿಕಾರ ಸ್ವೀಕರಿಸಿರುವ ಬೆನ್ನಲ್ಲೇ ಸಚಿವ ಸಂಪುಟ ರಚನೆ ಕುತೂಹಲ ಮೂಡಿಸಿದ್ದು, ಇನ್ನೆರಡು ದಿನಗಳಲ್ಲಿ ಬೊಮ್ಮಾಯಿ ಸಂಪುಟ ರಚನೆ ಫೈನಲ್ ಆಗಲಿದೆ.
ಸಂಪುಟ ರಚನೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಸಚಿವ ಸಂಪುಟದ ಬಗ್ಗೆ ಶೀಘ್ರದಲ್ಲೇ ತಿಳಿಸಲಾಗುತ್ತೆ. ನಾಳೆ ಅಥವಾ ನಾಡಿದ್ದು, ಹೈಕಮಾಂಡ್ ನಿಂದ ಮಾಹಿತಿ ಬರಲಿದೆ ಎಂದು ತಿಳಿಸಿದರು.
ಇದೇ ವೇಳೆ ಸಿಎಂ ಬೊಮ್ಮಾಯಿ ಶಕ್ತಿಕೇಂದ್ರ ಕಾವೇರಿ ನಿವಾಸಕ್ಕೆ ತೆರಳಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿಯಾಗಿ ಚರ್ಚೆ ನಡೆಸಿದ್ದು, ಬಿ ಎಸ್ ವೈ ಆಪ್ತ ಶಾಸಕರು ಸಂಪುಟ ಸೇರಲು ಲಾಬಿ ನಡೆಸಿದ್ದು, ಆಪ್ತರ ಪರ ಯಡಿಯೂರಪ್ಪ ಬ್ಯಾಟಿಂಗ್ ನಡೆಸಿದ್ದಾರೆ ಎನ್ನಲಾಗಿದೆ.