ಬೆಂಗಳೂರು: ರಾಜ್ಯ ಸರ್ಕಾರದಿಂದ ಅನುದಾನ ರಹಿತ ಶಾಲೆಗಳ ಶಿಕ್ಷಕರು ಮತ್ತು ಶಿಕ್ಷಕರ ಸಿಬ್ಬಂದಿಗೆ 2021 – 22 ನೇ ಸಾಲಿನ ವಿಶೇಷ ಪ್ಯಾಕೇಜ್ ಪರಿಹಾರ ಬಿಡುಗಡೆ ಮಾಡಲು ಸರ್ಕಾರ ಆದೇಶ ಹೊರಡಿಸಿದೆ.
ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,72,945 ಶಿಕ್ಷಕರು, ಸುಮಾರು 34 ಸಾವಿರ ಬೋಧಕೇತರ ಸಿಬ್ಬಂದಿಗೆ ತಲಾ 5 ಸಾವಿರ ರೂಪಾಯಿ ನೀಡಲಾಗುವುದು. ಕೋವಿಡ್ ವಿಶೇಷ ಪ್ಯಾಕೇಜ್ ಪರಿಹಾರ ಧನವಾಗಿ 10,347.25 ಲಕ್ಷ ರೂ. ಬಿಡುಗಡೆ ಮಾಡಲು ಆದೇಶಿಸಲಾಗಿದೆ. ಶಿಕ್ಷಣ ಇಲಾಖೆ ಆಯುಕ್ತರು ಈ ಕುರಿತಂತೆ ಸುತ್ತೋಲೆ ಹೊರಡಿಸಿದ್ದಾರೆ ಎಂದು ಹೇಳಲಾಗಿದೆ.
ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಯ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ ಪರಿಹಾರ ವಿಶೇಷ ಪ್ಯಾಕೇಜ್ ವರ್ಗಾವಣೆ ಮಾಡಲಾಗುವುದು ಎಂದು ಹೇಳಲಾಗಿದೆ.