ಬೆಂಗಳೂರು: ಸಚಿವ ಸಂಪುಟ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಬುಲಾವ್ ನೀಡಿರುವ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವ ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭೇಟಿಯಾಗಲಿದ್ದಾರೆ.
ಆದರೆ ಜೆ.ಪಿ.ನಡ್ಡಾ ಭೇಟಿ ಸಮಯ ಮತ್ತೆ ಮತ್ತೆ ವಿಳಂಬವಾಗುತ್ತಿದೆ. ಇಂದು ಬೆಳಿಗ್ಗೆ 9 ಗಂಟೆಗೆ ಸಿಎಂ ಬೊಮ್ಮಾಯಿ-ಜೆ.ಪಿ.ನಡ್ಡಾ ಭೇಟಿ ಸಮಯ ನಿಗದಿಯಾಗಿತ್ತು. ಆದರೆ ಏಕಾಏಕಿ ಮುಂದೂಡಲಾಗಿದ್ದು, ಬಳಿಕ ಬೆಳಿಗ್ಗೆ 11 ಗಂಟೆಗೆ ನಡ್ಡಾ ಭೇಟಿ ಸಮಯ ನಿಗದಿಯಾಯಿತು. ಆದರೀಗ ಆ ಸಮಯವೂ ಮುಂದೂಡಲಾಗಿದ್ದು, ಇಂದು ಸಂಜೆ ಜೆ.ಪಿ.ನಡ್ಡಾ ಭೇಟಿಯಾಗಲಿದ್ದಾರೆ ಎನ್ನಲಾಗಿದೆ. ಭೇಟಿ ವೇಳೆ ಸಚಿವರ ಪಟ್ಟಿ ಫೈನಲ್ ಆಗಲಿದ್ದು, ಸಂಪುಟ ರಚನೆಗೆ ಇಂದೇ ಮುಹೂರ್ತ ಫಿಕ್ಸ್ ಆಗುವ ಸಾಧ್ಯತೆ ಇದೆ.
ನ್ಯಾಯಬೆಲೆ ಅಂಗಡಿಯಲ್ಲಿ ಫುಡ್ ಕಿಟ್ ವಿತರಣೆ, ವಿವಾದಕ್ಕೆ ಕಾರಣವಾದ ಸೂಚನೆ
ಸಿಎಂ ದೆಹಲಿ ಭೇಟಿ ಬೆನ್ನಲ್ಲೇ ಸಚಿವಾಕಾಂಕ್ಷಿಗಳು ದೆಹಲಿಗೆ ತೆರಳಿದ್ದು, ಕರ್ನಾಟಕ ಭವನದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮಂತ್ರಿ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದಾರೆ.