ನವದೆಹಲಿ: ಇತ್ತೀಚೆಗಷ್ಟೇ ಸುರಿದ ಭಾರೀ ಮಳೆ ಮತ್ತು ಪ್ರವಾಹದಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕಿಂಗ್ ಮಾಹಿತಿ ಇಲ್ಲಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ನಲ್ಲಿ ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂಗಾರು ಋತುವಿನ ಎರಡು ತಿಂಗಳು ಮುಕ್ತಾಯವಾಗಿದ್ದು, ಇನ್ನೂ ಎರಡು ತಿಂಗಳು ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಭಾರತೀಯ ಹವಾಮಾನ ಇಲಾಖೆಯ ಪ್ರಧಾನ ನಿರ್ದೇಶಕ ಮೃತ್ಯುಂಜಯ ಮೊಹಾಪಾತ್ರ ಅವರು, ಕರ್ನಾಟಕದಲ್ಲಿ ಎರಡು ತಿಂಗಳು ಹೆಚ್ಚಿನ ಮಳೆಯಾಗಲಿದೆ. ತಮಿಳುನಾಡು, ತೆಲಂಗಾಣ, ಆಂಧ್ರ ಪ್ರದೇಶ, ಗೋವಾ, ಮಹಾರಾಷ್ಟ್ರ, ಕೊಂಕಣ ಪ್ರದೇಶ, ಗುಜರಾತ್ ದಕ್ಷಿಣ ಭಾಗದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹೇಳಲಾಗಿದೆ.