alex Certify ಹೊಸ ಬಿಡುಗಡೆ ದಿನಾಂಕ ಘೋಷಿಸಿದ ‘ಪುಷ್ಪ’ ಚಿತ್ರತಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ಬಿಡುಗಡೆ ದಿನಾಂಕ ಘೋಷಿಸಿದ ‘ಪುಷ್ಪ’ ಚಿತ್ರತಂಡ

ಸುಕುಮಾರ್ ನಿರ್ದೇಶನದ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಬಹುನಿರೀಕ್ಷಿತ ‘ಪುಷ್ಪ’ ಚಿತ್ರವನ್ನು ಡಿಸೆಂಬರ್ 25 ರ ಕ್ರಿಸ್ಮಸ್ ಹಬ್ಬದಂದು ಬಿಡುಗಡೆ ಮಾಡಲಿದ್ದಾರೆ. ಅಂದುಕೊಂಡಂತೆ ಆಗಿದ್ದರೆ ಆಗಸ್ಟ್ 13ರಂದು ಈ ಸಿನಿಮಾ ತೆರೆಮೇಲೆ ಬರಬೇಕಿತ್ತು. ಕೊರೊನಾ ಕಾರಣದಿಂದ ಮುಂದೂಡಬೇಕಾಯಿತು. ಇದೀಗ ಹೊಸ ಬಿಡುಗಡೆ ದಿನಾಂಕವನ್ನು ‘ಪುಷ್ಪ’ ಚಿತ್ರತಂಡ ಅನೌನ್ಸ್ ಮಾಡಿದೆ.

ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ ನಿಂದ ನಿರ್ಮಾಣವಾಗುತ್ತಿರುವ ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅಭಿನಯಿಸಿದ್ದಾರೆ. ತೆಲುಗು ಸೇರಿದಂತೆ ಕನ್ನಡ, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ.

ಈ ಚಿತ್ರಕ್ಕೆ ದೇವಿಶ್ರೀ ಪ್ರಸಾದ್ ಅವರ ಸಂಗೀತವಿದೆ. ಫಹಾದ್ ಫಾಸಿಲ್, ಪ್ರಕಾಶ್ ರಾಜ್, ಜಗಪತಿ ಬಾಬು, ಅನಸೂಯ ಭಾರದ್ವಾಜ್ ಹಾಗೂ ಕನ್ನಡದ ಡಾಲಿ ಧನಂಜಯ್ ಸೇರಿದಂತೆ ಮೊದಲಾದ ಕಲಾವಿದರು ಈ ಸಿನಿಮಾದಲ್ಲಿ ತೆರೆಹಂಚಿಕೊಂಡಿದ್ದಾರೆ.

https://www.instagram.com/p/CSGo3kFCSxH/?utm_source=ig_web_copy_link

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...