ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1674 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 1376 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 38 ಸೋಂಕಿತರು ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ದರ ಶೇಕಡ 1.38 ರಷ್ಟು ಇದೆ. 24,280 ಸಕ್ರಿಯ ಪ್ರಕರಣಗಳು ಇದ್ದು, ಇವತ್ತು 1,21,021 ಪರೀಕ್ಷೆ ನಡೆಸಲಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ 477 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 154 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 7 ಮಂದಿ ಸೋಂಕಿತರು ಇಂದು ಮೃತಪಟ್ಟಿದ್ದಾರೆ.