alex Certify ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ವಿಶೇಷ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ವಿಶೇಷ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2021-22ನೇ ಸಾಲಿಗೆ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ಬಿ.ಇಡಿ ಮತ್ತು ಡಿ.ಇಡಿ ಕೋರ್ಸ್‍ಗಳಲ್ಲಿ ವ್ಯಾಸಂಗಕ್ಕಾಗಿ ವಿಶೇಷ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಿದೆ.

ಅಭ್ಯರ್ಥಿಗಳು ಕರ್ನಾಟಕ ರಾಜ್ಯ ನಿವಾಸಿಯಾಗಿದ್ದು, ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಗರಿಷ್ಠ ಆದಾಯ 6 ಲಕ್ಷ ರೂ. ಮೀರಿರಬಾರದು.

ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಇಲಾಖೆಯ ವೆಬ್‍ಸೈಟ್ https://dom.karnataka.gov.in ನಿಂದ ಡೌನ್‍ಲೋಡ್ ಮಾಡಿಕೊಂಡು ಅಥವಾ ತಾಲೂಕು ಮಾಹಿತಿ ಕೇಂದ್ರಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ನಿವಾಸಿ ದೃಢೀಕರಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಿಂದಿನ ವರ್ಷದ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಶುಲ್ಕ ರಸೀದಿ, ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಪಾಸ್‍ಬುಕ್ ಪ್ರತಿಯನ್ನು ಲಗತ್ತಿಸಿ ದಿ: 16.08.2021 ರೊಳಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 2ನೇ ಮಹಡಿ, ಜಿಲ್ಲಾ ಪಂಚಾಯತ್ ಕಟ್ಟಡ, ಕುವೆಂಪು ರಸ್ತೆ, ಶಿವಮೊಗ್ಗ ಇಲ್ಲಿ ಸಲ್ಲಿಸುವಂತೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-220206ನ್ನು ಸಂಪರ್ಕಿಸುವುದು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...