ಅಹಮದಾಬಾದ್: ಪಡಿತರ ವಿತರಣೆ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ರಾಜ್ಯದ ಫಲಾನುಭವಿಗಳಿಗೆ ವರ್ಚುಯಲ್ ಸಂವಾದ ನಡೆಸಿದ ಪ್ರಧಾನಿ ಮೋದಿ, ಪ್ರಧಾನಮಂತ್ರಿ ಗರಿಬ್ ಕಲ್ಯಾಣ ಯೋಜನೆ ಅಡಿಯಲ್ಲಿ ಕೊರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ ದೇಶದ 80 ಕೋಟಿ ಜನರಿಗೆ 2 ಲಕ್ಷ ಕೋಟಿ ರೂಪಾಯಿ ವೆಚ್ಚದ ಪಡಿತರ ವಿತರಿಸಲಾಗಿದೆ ಎಂದು ಹೇಳಿದ್ದಾರೆ.
ಪಡಿತರ ಲೋಪದೋಷಗಳನ್ನು ಸರಿಪಡಿಸಿ ತಂತ್ರಜ್ಞಾನದ ಸಮರ್ಪಕ ಬಳಕೆಯಿಂದ ಆಧಾರ್ ಕಾರ್ಡ್ ಜೋಡಣೆ, ಒನ್ ನೇಷನ್ ಒನ್ ರೇಷನ್ ಯೋಜನೆ ಮೊದಲಾದ ಕ್ರಮಗಳ ಮೂಲಕ ಸಮರ್ಪಕವಾಗಿ ಪಡಿತರ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಯಾರೊಬ್ಬರೂ ಕೂಡ ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಪಡಿತರ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ನವೆಂಬರ್ ವರೆಗೆ ಪಡಿತರ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರತಿಯೊಬ್ಬ ಭಾರತೀಯರಿಗೂ ಆಹಾರ ಸಿಗುವಂತೆ ಮಾಡುವುದು ಸರ್ಕಾರದ ಗುರಿ. ಅಷ್ಟೇ ಅಲ್ಲದೇ ಈ ಕಾರ್ಯಕ್ರಮವು ದೀಪಾವಳಿವರೆಗೆ ದೇಶಾದ್ಯಂತ ಮುಂದುವರಿಯುತ್ತದೆ. ದಿನಸಿಗಳಿಗೆ ಒಂದು ಪೈಸೆಯನ್ನೂ ಪಾವತಿಸಬೇಕಾಗಿಲ್ಲ ಎಂದು ಹೇಳಿದ್ದಾರೆ.