ಬೆಂಗಳೂರು: ಸಚಿವರಿಗೆ ಕೋವಿಡ್, ನೆರೆ ವೀಕ್ಷಣೆಗೆ ಜಿಲ್ಲೆ ಹಂಚಿಕೆ ಮಾಡಲಾಗುವುದು. ನಾಳೆಯೇ ಸಚಿವರು ಜಿಲ್ಲೆಗಳಿಗೆ ತೆರಳಿ ಪರಿಹಾರ ಕಾರ್ಯ ಕೈಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನೂತನ ಸಚಿವರೊಂದಿಗೆ ಸಭೆ ನಡೆಸಿದ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನೂತನ ಸಚಿವರು ನೆರೆ ವೀಕ್ಷಣೆಗೆ ಜೊತೆಗೆ ಪರಿಹಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ. ಒಂದೆರಡು ದಿನಗಳಲ್ಲಿ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದು. ಯಾವುದೇ ಸಚಿವರು ಇಂತಹುದೇ ಖಾತೆ ಬೇಕೆಂದು ಒತ್ತಾಯಿಸಿಲ್ಲ. ಹಳೆಯ ಖಾತೆಯಲ್ಲಿ ಮುಂದುವರೆಸುವಂತೆ ಯಾರೂ ಹೇಳಿಲ್ಲ. ಒಂದೆರಡು ದಿನಗಳಲ್ಲಿ ಖಾತೆ ಹಂಚಿಕೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಸ್ಥಳೀಯವಾಗಿಯೇ ಸಂತ್ರಸ್ತರಿಗೆ ಪರಿಹಾರ ಕೊಡುವ ವ್ಯವಸ್ಥೆ ಮಾಡಲಾಗುವುದು ಕೋವಿಡ್ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.