ಮುಖ್ಯಮಂತ್ರಿ ಸ್ಥಾನದಿಂದ ತಮ್ಮನ್ನು ಕೆಳಗಿಳಿಸುವಲ್ಲಿ ಯಶಸ್ವಿಯಾದವರಿಗೆ ಯಡಿಯೂರಪ್ಪ ಬಿಗ್ ಶಾಕ್ ನೀಡಿದ್ದಾರೆ. ಬಿ.ಎಸ್.ವೈ. ಒತ್ತಡಕ್ಕೆ ಮಣಿದ ಬಿಜೆಪಿ ಹೈಕಮಾಂಡ್ ಕೂಡ ಮೂವರಿಗೆ ಶಾಕ್ ನೀಡಿದೆ.
ಸಿ.ಪಿ. ಯೋಗೇಶ್ವರ್, ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಅರವಿಂದ ಬೆಲ್ಲದ ಅವರು ಸಚಿವ ಸ್ಥಾನ ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ.
ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಸಿ.ಪಿ. ಯೋಗೇಶ್ವರ್, ಅರವಿಂದ ಬೆಲ್ಲದ ದೆಹಲಿಗೆ ದಂಡಯಾತ್ರೆ ನಡೆಸಿದ್ದರು. ಖಾಸಗಿ ಕೆಲಸದ ನಿಮಿತ್ತ ದೆಹಲಿಗೆ ಹೋಗುವುದಾಗಿ ಹೇಳಿ ಹಲವು ಬಾರಿ ವರಿಷ್ಠರನ್ನು ಭೇಟಿ ಮಾಡಿ ಬಂದಿದ್ದರು. ಸತತ ಪ್ರಯತ್ನದಿಂದ ಸಿಎಂ ಯಡಿಯೂರಪ್ಪ ಅವರನ್ನು ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದರೂ ಕೂಡ ಅವರು ಸಂಪುಟದಲ್ಲಿ ಸ್ಥಾನ ಪಡೆದುಕೊಳ್ಳಲು ಅವರು ವಿಫಲರಾಗಿದ್ದಾರೆ. ಯಡಿಯೂರಪ್ಪ ಷರತ್ತಿನಂತೆ ಈ ಮೂವರಿಗೆ ಸಚಿವ ಸ್ಥಾನ ಕೈತಪ್ಪಿದೆ ಎಂದು ಹೇಳಲಾಗುತ್ತಿದೆ. ಇನ್ನು ವಿಜಯೇಂದ್ರ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಸುವ ಪ್ರಯತ್ನದಲ್ಲಿ ಯಡಿಯೂರಪ್ಪನವರಿಗೆ ಹಿನ್ನಡೆಯಾಗಿದೆ ಎಂದು ಹೇಳಲಾಗಿದೆ.