ಬೆಂಗಳೂರು: ನೂತನ ಸಚಿವರು ತಮಗೆ ಇಂಥದ್ದೇ ಖಾತೆ ಬೇಕು ಎಂದು ಯಾವುದೇ ಬೇಡಿಕೆ ಇಟ್ಟಿಲ್ಲ. ಮೊದಲ ಖಾತೆಯಲ್ಲಿಯೇ ಮುಂದುವರೆಸಿ ಎಂದು ಕೂಡ ಹೇಳಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ನೂತನ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಸಂಪುಟ ರಚನೆಗೆ ಹಿಂದೆ 10-15 ದಿನ, ತಿಂಗಳು ಹಿಡಿಯುತ್ತಿತ್ತು. ಆದರೆ ನಾನು 3 ದಿನಗಳಲ್ಲಿ ಸಚಿವರ ಪಟ್ಟಿ ಫೈನಲ್ ಮಾಡಿಕೊಂಡು ಬಂದಿದ್ದೇನೆ. ಹೀಗಾಗಿ ಖಾತೆ ಹಂಚಿಕೆಗೆ ಹೆಚ್ಚು ದಿನ ತೆಗೆದುಕೊಳ್ಳುವುದಿಲ್ಲ ಒಂದೆರಡು ದಿನಗಳಲ್ಲಿ ನಾನೇ ಖಾತೆ ಹಂಚಿಕೆ ಮಾಡುತ್ತೇನೆ. ಯಾವುದೇ ಖಾತೆ ನೀಡಿದರೂ ನಿಭಾಯಿಸುತ್ತೇವೆ ಎಂದು ಸಚಿವರು ಹೇಳಿದ್ದಾರೆ ಎಂದರು.
10, 20, 50, 100, 2000 ನೋಟು ಮುದ್ರಿಸಲು ಎಷ್ಟು ಖರ್ಚಾಗುತ್ತೆ ಗೊತ್ತಾ…..?
ಸಚಿವರಿಗೆ ಕೋವಿಡ್, ನೆರೆ ವೀಕ್ಷಣೆಗೆ ಜಿಲ್ಲೆ ಹಂಚಿಕೆ ಮಾಡುತ್ತೇವೆ. ನಾಳೆಯೇ ಸಚಿವರು ಜಿಲ್ಲೆಗಳಿಗೆ ತೆರಳಿ ಪರಿಹಾರ ಕಾರ್ಯ ಕೈಗೊಳ್ಳಲಿದ್ದಾರೆ. ಸ್ಥಳೀಯವಾಗಿ ಪರಿಹಾರ ಕೊಡುವ ವ್ಯವಸ್ಥೆ ಮಾಡಲಿದ್ದಾರೆ. ಖಾತೆ ಹಂಚಿಕೆ ಬಳಿಕ ಕೋವಿಡ್ ಟಾಸ್ಕ್ ಫೋರ್ಸ್ ಪುನಾರಚನೆ ಮಾಡಲಾಗುವುದು ಎಂದು ತಿಳಿಸಿದರು.