ಬೆಂಗಳೂರು: ಇಂದು ಎರಡನೇ ಬಾರಿಗೆ ನೂತನ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಪ್ರಮಾಣವಚನ ಸ್ವೀಕರಿಸಿದ್ದಾರೆ.
ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ಅವರು ಮತ್ತೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮಧ್ಯಾಹ್ನ ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ಅಧಿಕಾರ ಪ್ರಮಾಣವನ್ನೇ ಅವರು ಎರಡು ಬಾರಿ ಓದಿದ್ದರು. ಈ ಹಿನ್ನಲೆಯಲ್ಲಿ ರಾಜಭವನದಲ್ಲಿ ರಾಜ್ಯಪಾಲರ ಕಚೇರಿಯಲ್ಲಿ ಶಂಕರ ಪಾಟೀಲ ಮುನೇನಕೊಪ್ಪ ಪ್ರಮಾಣವಚನ ಸ್ವೀಕರಿಸಿದರು.