ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಅಧಿಕಾರಿಗಳ ಜೊತೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯಾದ್ಯಂತ ರಾತ್ರಿ 9ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ. ಕೇರಳ, ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದೆ ಎಂದು ತಿಳಿಸಿದರು.
CBSE ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಮಾಹಿತಿ
ಬಳಿಕ ಪರಿಸ್ಥಿತಿ ಅವಲೋಕಿಸಿ ಕೋವಿಡ್ ನಿಯಂತ್ರಣಕ್ಕೆ ಇನ್ನಷ್ಟು ಕಠಿಣ ಕ್ರಮಗಳ ಬಗ್ಗೆ ಈ ತಿಂಗಳಾಂತ್ಯಕ್ಕೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.