ಬೆಂಗಳೂರು: ಖಾತೆ ಹಂಚಿಕೆ ವಿಚಾರವಾಗಿ ಹಲವು ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದು, ಈ ನಡುವೆ ಸಚಿವ ಆನಂದ್ ಸಿಂಗ್ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ತಮ್ಮ ನೋವು ತೋಡಿಕೊಂಡಿದ್ದಾರೆ. ಈ ವೇಳೆ ಸಮಾಧಾನ ಪಡಿಸಿರುವ ಸಿಎಂ ಭರವಸೆಯೊಂದನ್ನು ನೀಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಅಸಮಾಧಾನ ಹಿನ್ನೆಲೆಯಲ್ಲಿ ಆನಂದ್ ಸಿಂಗ್ ಅವರನ್ನು ಕರೆದು ಮಾತನಾಡಿದ್ದೇನೆ. ಈ ವೇಳೆ ಆನಂದ್ ಸಿಂಗ್ ತಮ್ಮ ಭಾವನೆ ಹೇಳಿಕೊಂಡಿದ್ದಾರೆ. ಅವರ ಭಾವನೆ, ಮನವಿ ಗೌರವಿಸುತ್ತೇವೆ. ಮುಂದಿನ ದಿನಗಳಲ್ಲಿ ಸರಿಪಡಿಸುವುದಾಗಿ ಹೇಳಿ ಕಳಿಸಿದ್ದೇನೆ ಎಂದು ಹೇಳಿದರು.
ಗಮನಿಸಿ…! ಎರಡು ದಿನ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ –ಕರಾವಳಿಯಲ್ಲಿ ಭಾರಿ ಗಾಳಿ
ಖಾತೆ ಹಂಚಿಕೆ ವಿಚಾರವಾಗಿ ಎಂಟಿಬಿ ನಾಗರಾಜ್ ಕೂಡ ಅಸಮಾಧಾನ ಹೊರಹಾಕಿದ್ದಾರೆ. ಇಂದು ಸಂಜೆ ಎಂಟಿಬಿ ಕೂಡ ಭೇಟಿಯಾಗಲಿದ್ದಾರೆ. ಅವರೊಂದಿಗೂ ಚರ್ಚಿಸುತ್ತೇನೆ ಎಂದು ಹೇಳಿದರು.