ಮಂಗಳೂರು: ಸುಬ್ರಹ್ಮಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಬ್ಲಾಕ್ಮೇಲ್ ಮಾಡಲಾಗಿದೆ. ಸರ್ಕಾರಿ ಶಾಲೆ ಶಿಕ್ಷಕ ಮತ್ತು ಕೃತ್ಯಕ್ಕೆ ಸಹಕಾರ ನೀಡಿದ ಆತನ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಾಜೆಕ್ಟ್ ವರ್ಕ್ ನೆಪದಲ್ಲಿ ಶಿಕ್ಷಕ ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿಕೊಂಡು ಬಳಿಕ ಪುಸಲಾಯಿಸಿ ಅತ್ಯಾಚಾರವೆಸಗಿದ್ದ. ವಿವಸ್ತ್ರಗೊಳಿಸಿ ಮೊಬೈಲ್ ಮೂಲಕ ಫೋಟೋ ತೆಗೆಯುತ್ತಿದ್ದ. ಫೋಟೋ ತೋರಿಸಿ ಮನೆಯಿಂದ ಹಣ ತರುವಂತೆ ಬೆದರಿಸುತ್ತಿದ್ದ ಎನ್ನಲಾಗಿದೆ.
2018 ರಿಂದ ರಾಯಚೂರು ಮೂಲದ ಶಿಕ್ಷಕ ಇಂತಹ ಕೃತ್ಯವೆಸಗಿದ್ದಾನೆ. ಸುಬ್ರಹ್ಮಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕನ ವಿರುದ್ಧ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದು, ಅವರನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ.