ಮಡಿಕೇರಿ: ಯುವ ಕೌಶಲ್ಯ ಮಾಸಾಚರಣೆ ಅಂಗವಾಗಿ ಜಿಲ್ಲಾ ಕೌಶಲ್ಯ ಮಿಷನ್ ವತಿಯಿಂದ ಆಗಸ್ಟ್ 12 ಮತ್ತು 13 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಉದ್ಯೋಗ ಮೇಳ-2021 ವು ಮಡಿಕೇರಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಲಿದೆ.
ಖಾಸಗಿ ಕಂಪನಿಗಳಲ್ಲಿ ಹಿಂದುಜಾ ಗ್ಲೋಬಲ್ ಸೆಲ್ಯೂಷನ್ಸ್, ಗ್ರಾಸ್ರೂಟ್ಸ್, ಬ್ಲಾನ್ಕಾಫಿ ಪ್ರೈ ಲಿ. ಸೇರಿದಂತೆ ಹೋಟೆಲ್ ಉದ್ಯಮ, ಕಾಫಿ ಸಂಸ್ಕರಣಾ ಘಟಕಗಳು, ಮಾರುಕಟ್ಟೆ, ಇನ್ಸೂರೆನ್ಸ್, ಹಾಗೂ ಆರೋಗ್ಯ ಸೇವೆಗಳಲ್ಲಿ ನಿರತರಾಗಿರುವ 10 ರಿಂದ 15 ಕಂಪನಿಗಳು ಭಾಗವಹಿಸಲಿದೆ. 10ನೇ ತರಗತಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ, ಇಂಜಿನಿಯರಿಂಗ್ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.
ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐ.ಟಿ.ಐ), ಮಡಿಕೇರಿಯಲ್ಲಿ ಆಯೋಜಿಸಲಾಗುತ್ತಿರುವ ಮಿನಿ ಉದ್ಯೋಗಮೇಳದಲ್ಲಿ ಭಾಗವಹಿಸುವ ಉದ್ಯೋಗಾಕಾಂಕ್ಷಿಗಳು https://tinyurl.com/Job-fair-Kodaguಆನ್ಲೈನ್ ಮೂಲಕ ನೋಂದಾಯಿಸಿಕೊಂಡು ತಮ್ಮ ವೈಯಕ್ತಿಕ ವಿವರ ಹಲವು ಪ್ರತಿಗಳೊಂದಿಗೆ ಸ್ವಂತ ಖರ್ಚಿನಲ್ಲಿ ಸಂದರ್ಶನಕ್ಕೆ ಹಾಜರಾಗುವುದು. ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಉದ್ಯೋಗದಾತರು ಸಹ ತಮ್ಮಲ್ಲಿ ಲಭ್ಯವಿರುವ ಖಾಲಿ ಹುದ್ದೆಗಳ ವಿವರವನ್ನು ಕಚೇರಿಯ ಇ-ಮೇಲ್ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಕೊಡಗು ಜಿಲ್ಲೆ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿಯನ್ನು ಪಡೆಯುವುದು ಅಥವಾ ದೂ.ಸಂ.8147573281 ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು.
ಉದ್ಯೋಗಮೇಳಕ್ಕೆ ಆಗಮಿಸುವ ಎಲ್ಲಾ ಅಭ್ಯರ್ಥಿಗಳು/ಉದ್ಯೋಗದಾತರು ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಜರ್ ಬಳಕೆ ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದರ ಮೂಲಕ ಸಂದರ್ಶನದಲ್ಲಿ ಭಾಗಿಯಾಗುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅವರು ತಿಳಿಸಿದ್ದಾರೆ.