ವಸತಿರಹಿತ ಪರಿಶಿಷ್ಟ ಜಾತಿ ಕುಟುಂಬದವರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೆಂಗಳೂರಿನ ವಿಕಾಸಸೌಧದಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ.
ಪರಿಶಿಷ್ಟ ಜಾತಿ ಕುಟುಂಬದವರು ಮನೆ ನಿರ್ಮಿಸಿಕೊಳ್ಳಲು ಈವರೆಗೆ 1.70 ಲಕ್ಷ ರೂಪಾಯಿಗಳನ್ನು ಸಹಾಯಧನವಾಗಿ ನೀಡಲಾಗುತ್ತಿತ್ತು. ಇದೀಗ ಆ ಮೊತ್ತವನ್ನು ಐದು ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲಾಗುತ್ತದೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಕೇವಲ 1.70 ಲಕ್ಷ ರೂಪಾಯಿಗಳಲ್ಲಿ ಉತ್ತಮ ಮನೆ ನಿರ್ಮಿಸಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂಬ ಕಾರಣಕ್ಕೆ ಸಹಾಯಧನವನ್ನು 5 ಲಕ್ಷ ರೂಪಾಯಿಗಳಿಗೆ ಏರಿಕೆ ಮಾಡಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.