ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರ ತಗ್ಗತೊಡಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಬಹುತೇಕ ಎಲ್ಲ ಚಟುವಟಿಕೆಗಳು ಆರಂಭವಾಗಿದ್ದು, ಶೈಕ್ಷಣಿಕ ಚಟುವಟಿಕೆಗಳ ಆರಂಭಕ್ಕೆ ಸಿದ್ಧತೆ ನಡೆದಿದೆ. ಆಗಸ್ಟ್ 23ರಿಂದ ಪಿಯು ಕಾಲೇಜುಗಳನ್ನು ಆರಂಭಿಸಲು ಪದವಿಪೂರ್ವ ಶಿಕ್ಷಣ ಇಲಾಖೆ ತೀರ್ಮಾನಿಸಿದೆ.
ಈ ಹಿನ್ನೆಲೆಯಲ್ಲಿ ಸುತ್ತೋಲೆಯೊಂದನ್ನು ಹೊರಡಿಸಲಾಗಿದ್ದು, ಉಪನ್ಯಾಸಕರು, ಸಿಬ್ಬಂದಿ ಕಡ್ಡಾಯವಾಗಿ ಲಸಿಕೆ ಪಡೆದು ಕಾಲೇಜಿಗೆ ಆಗಮಿಸಲು ಸೂಚಿಸಲಾಗಿದೆ. ಲಸಿಕೆ ಪಡೆದಿರುವ ಕುರಿತು ಸ್ಟೂಡೆಂಟ್ ಟ್ರಾಕಿಂಗ್ ಸಿಸ್ಟಮ್ ನಲ್ಲಿ ದಾಖಲು ಮಾಡಲು ಹೇಳಲಾಗಿದೆ.
ವಸತಿರಹಿತ ಪರಿಶಿಷ್ಟ ಜಾತಿ ಕುಟುಂಬದವರಿಗೆ ಭರ್ಜರಿ ಗುಡ್ ನ್ಯೂಸ್
ಒಂದೊಮ್ಮೆ ಲಸಿಕೆ ಪಡೆಯದೆ ಬರುವ ಉಪನ್ಯಾಸಕರು ಹಾಗೂ ಸಿಬ್ಬಂದಿಗೆ ವೇತನ ರಹಿತ ರಜೆಯಲ್ಲಿ ಕಳುಹಿಸಲಾಗುತ್ತದೆ ಎಂದು ಹೇಳಲಾಗಿದ್ದು, ಉಪನ್ಯಾಸಕರ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.