BIG NEWS: ಹು-ಧಾ, ಕಲಬುರಗಿ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್ 11-08-2021 3:43PM IST / No Comments / Posted In: Karnataka, Latest News, Live News ಹುಬ್ಬಳ್ಳಿ-ಧಾರವಾಡ, ಕಲಬುರಗಿ ಹಾಗೂ ಬೆಳಗಾಗಿ ಮಹಾನಗರ ಪಾಲಿಕೆಗೆ ಚುನಾವಣಾ ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್ 3ರಂದು ಚುನಾವಣೆ ನಡೆಯಲಿದ್ದು ಸೆಪ್ಟೆಂಬರ್ 6ನೇ ತಾರೀಖಿನಂದು ಫಲಿತಾಂಶ ಘೋಷಣೆಯಾಗಲಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ. ಆಗಸ್ಟ್ 6ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಹಾಗೂ ಆಗಸ್ಟ್ 23 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಹುಬ್ಬಳ್ಳಿ – ಧಾರವಾಡದಲ್ಲಿ ಕಳೆದ 2 ವರ್ಷಗಳಿಂದ ಮಹಾನಗರ ಪಾಲಿಕೆ ಚುನಾವಣೆ ನೆನೆಗುದಿಗೆ ಬಿದ್ದಿತ್ತು. ಇತ್ತ ಕಲಬುರಗಿ ಜಿಲ್ಲೆಯಲ್ಲಿಯೂ ಕಳೆದ 3 ವರ್ಷಗಳಿಂದ ಪಾಲಿಕೆ ಚುನಾವಣೆಯ ಕೂಗು ಕೇಳಿ ಬಂದಿತ್ತು. ಇತ್ತ ಬೆಳಗಾವಿ ಕಳೆದ 2 ವರ್ಷಗಳಿಂದ ಪಾಲಿಕೆ ಚುನಾವಣಾ ದಿನಾಂಕಕ್ಕೆ ಎದುರು ನೋಡುತ್ತಿತ್ತು. ಕೋವಿಡ್ ಕಾರಣ ನೀಡಿ ಡಿಸೆಂಬರ್ವರೆಗೂ ಚುನಾವಣೆಯನ್ನು ಮುಂದೂಡಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ತರಾಟೆಗೆ ತೆಗೆದುಕೊಂಡಿದ್ದ ರಾಜ್ಯ ಹೈಕೋರ್ಟ್ ಶೀಘ್ರದಲ್ಲೇ ಚುನಾವಣಾ ದಿನಾಂಕ ಪ್ರಕಟಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿತ್ತು. ಅದರಂತೆ ಇದೀಗ ಪ್ರಸ್ತುತ 3 ಮಹಾನಗರ ಪಾಲಿಕೆಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ.