ಬೆಂಗಳೂರು: ರಾಜ್ಯದ 13 ಜಿಲ್ಲೆಗಳ 61 ತಾಲೂಕುಗಳನ್ನು ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ ತಾಲೂಕುಗಳು ಎಂದು ಸರ್ಕಾರ ಘೋಷಣೆ ಮಾಡಿದೆ.
ರಾಜ್ಯದಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿಯಿಂದ ಈ ತಾಲೂಕುಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಹಾನಿಯಾಗಿದೆ. ಮಳೆಹಾನಿ, ಬೆಳೆಹಾನಿ, ಮೂಲಸೌಕರ್ಯಗಳಿಗೆ ಹಾನಿ, ಜೀವ ಹಾನಿ ಉಂಟಾಗಿದೆ. ಪ್ರವಾಹ ಪೀಡಿತ ತಾಲೂಕುಗಳಲ್ಲಿ ಮಾರ್ಗಸೂಚಿಯ ಪ್ರಕಾರ ಪರಿಹಾರ ಕಾರ್ಯ ಕೈಗೊಳ್ಳಲು ಸೂಚನೆ ನೀಡಲಾಗಿದೆ.