ಮೆಲ್ಬರ್ನ್: ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಮಾಜಿ ಆಲ್ ರೌಂಡರ್ ಕ್ರಿಸ್ ಕೇನ್ಸ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಜೀವರಕ್ಷಕ ಸಾಧನದ ನೆರವು ಒದಗಿಸಲಾಗಿದೆ.
ಹೃದ್ರೋಗ ಸಮಸ್ಯೆ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಏರಾಟಿಕ್ ಡಿಸೆಕ್ಷನ್ ಎಂಬ ಕಾಯಿಲೆಯಿಂದ ಬಳಲುತ್ತಿರುವ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಸಿಡ್ನಿಯ ಸೇಂಟ್ ವಿನ್ಸೆಂಟ್ ಆಸ್ಪತ್ರೆಯಿಂದ ಮಾಹಿತಿ ನೀಡಲಾಗಿದೆ.
ಕ್ಯಾನ್ ಬೆರಾದಲ್ಲಿ ಕಳೆದ ವಾರ ಕ್ರಿಸ್ ಕೇನ್ಸ್ ಅವರಿಗೆ ಶಸ್ತ್ರಚಿಕಿತ್ಸೆ ನೆರವೇರಿಸಲಾಗಿದ್ದು, ಆರೋಗ್ಯ ಸ್ಥಿತಿ ಬಿಗಡಾಯಿಸಿದ್ದರಿಂದ ಸಿಡ್ನಿಯ ಸೇಂಟ್ ವಿನ್ಸೆಂಟ್ ಆಸ್ಪತ್ರೆಗೆ ದಾಖಲಿಸಿದ್ದು, ಜೀವ ಸುರಕ್ಷಾ ಸಾಧನ ಅಳವಡಿಸಲಾಗಿದೆ.