ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 41,195 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 490 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 429669 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 387987 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 39069 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 31260050 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ ದೇಶದಲ್ಲಿ 21,24,953 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 48,73,70,196 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. 24 ಗಂಟೆಯಲ್ಲಿ 44,19,627 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 52,36,71,019 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.