ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಮೂರನೇ ಅಲೆ ಸದ್ದಿಲ್ಲದೇ ಕಾಲಿಟ್ಟಂತಿದೆ. ಕೊರೊನಾ ಹೊಸ ತಳಿ ಡೆಲ್ಟಾ, ಕಪ್ಪಾ ಬೆನ್ನಲ್ಲೇ ಇದೀಗ ಮಕ್ಕಳಲ್ಲಿ ಸೋಂಕು ಹೆಚ್ಚುತ್ತಿದೆ.
ಕಳೆದ 10 ದಿನಗಳಲ್ಲಿ ಬೆಂಗಳೂರಿನಲ್ಲಿ 505 ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ. ಆಗಸ್ಟ್ 1ರಿಂದ 10ರವರೆಗೆ ಒಟ್ಟು 246 ಹೆಣ್ಣುಮಕ್ಕಳು ಹಾಗೂ 259 ಗಂಡು ಮಕ್ಕಳಲ್ಲಿ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಎಲ್ಲಾ ಮಕ್ಕಳು 15 ವರ್ಷದೊಳಗಿನವರು ಎಂದು ಹೇಳಲಾಗುತ್ತಿದೆ.
ಏನಿದು ʼಮಾರ್ಬರ್ಗ್ʼ ವೈರಸ್….? ಇಲ್ಲಿದೆ ಸಂಪೂರ್ಣ ವಿವರ
ರಾಜ್ಯ ಸರ್ಕಾರ ಶಾಲೆಗಳನ್ನು ಆರಂಭ ಮಾಡಲು ಮುಂದಾಗಿರುವ ಬೆನ್ನಲ್ಲೇ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಅದರಲ್ಲೂ ಚಿಕ್ಕ ಮಕ್ಕಳಲ್ಲಿ ಮಹಾಮಾರಿ ಇನ್ನಿಲ್ಲದಂತೆ ಕಾಡುತ್ತಿದೆ. ಸೋಂಕು ಹೆಚ್ಚದಂತೆ ತಡೆಯಲು ಇನ್ನಷ್ಟು ಕಠಿಣ ಕ್ರಮಗಳನ್ನು ಜಾರಿಗೆ ತರುವ ಸಾಧ್ಯತೆ ದಟ್ಟವಾಗಿದೆ.