ಬೆಂಗಳೂರು: ಶಾಸಕ ಸತೀಶ್ ರೆಡ್ಡಿ ಅವರಿಗೆ ಸೇರಿದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳನ್ನು ತಕ್ಷಣ ಪತ್ತೆ ಹಚ್ಚುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಪೊಲೀಸರು ನಾನು ಸೂಚಿಸುವ ಮುನ್ನವೇ ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ. ಮುರುಗನ್ ನೇತೃತ್ವದಲ್ಲಿ ತನಿಖೆ ಕೈಗೊಳ್ಳಲಾಗುತ್ತಿದ್ದು, ಮೂರು ವಿಶೇಷ ತಂಡ ರಚಿಸಿ ಆರೋಪಿಗಳಿಗಾಗಿ ಶೋಧ ನಡೆದಿದೆ ಎಂದರು.
‘ಗಜಾನನ and ಗ್ಯಾಂಗ್’ ಚಿತ್ರದ ವಿಡಿಯೋ ಸಾಂಗ್ ರಿಲೀಸ್
ಸುದ್ದಗುಂಟೆಪಾಳ್ಯ, ಬೊಮ್ಮನಹಳ್ಳಿ, ತಿಲಕ್ ನಗರ ಠಾಣೆಯ ಮೂವರು ಇನ್ಸ್ ಪೆಕ್ಟರ್ ಗಳ ನೇತೃತ್ವದಲ್ಲಿ ಆರೋಪಿಗಳ ಸೆರೆಗೆ ಕಾರ್ಯಾಚರಣೆ ಚುರುಕುಗೊಂಡಿದ್ದು, ಶೀಘ್ರದಲ್ಲೇ ತಪ್ಪಿತಸ್ಥರನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.