ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್ ಗಳಿಗೆ ಪ್ರವೇಶ ಕಲ್ಪಿಸುವ ಪಿಜಿ ನೀಟ್ 2021 ಪರೀಕ್ಷೆ ಸೆಪ್ಟೆಂಬರ್ 11 ರಂದು ನಡೆಯಲಿದೆ.
ವೈದ್ಯಕೀಯ ವಿಜ್ಞಾನಗಳ ರಾಷ್ಟ್ರೀಯ ಪರೀಕ್ಷಾ ಮಂಡಳಿ(NBEMS) ಸೆಪ್ಟಂಬರ್ 11 ರಂದು ಪಿಜಿ ನೀಟ್ ಪರೀಕ್ಷೆ ನಡೆಸಲು ನಿರ್ಧರಿಸಿದ್ದು, ಹೊಸದಾಗಿ ಅರ್ಜಿ ಸಲ್ಲಿಸಲು ತಿಳಿಸಿದೆ. ಈಗಾಗಲೇ ಅರ್ಜಿ ಸಲ್ಲಿಸಿದವರು ತಿದ್ದುಪಡಿ ಮಾಡಲು ಆಗಸ್ಟ್ 16 ರಿಂದ ಆಗಸ್ಟ್ 20 ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಜುಲೈ 1 ರಿಂದ ಸೆಪ್ಟೆಂಬರ್ 30 ರೊಳಗೆ ಇಂಟರ್ನ್ಶಿಪ್ ಪೂರ್ಣಗೊಳಿಸುವ ವೈದ್ಯಕೀಯ ಪದವೀಧರರು ಸ್ನಾತಕೋತ್ತರ ಕೋರ್ಸ್ ಗಳಿಗೆ ಪ್ರವೇಶ ಕಲ್ಪಿಸುವ ಪಿಜಿ ನೀಟ್ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೇ, ಹಿಂದುಳಿದ ವರ್ಗಗಳು(OBC) ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಅಖಿಲ ಭಾರತ ಮಟ್ಟದ ಕೋಟಾದ ಸೀಟುಗಳಲ್ಲಿ ಮೀಸಲಾತಿ ಕಲ್ಪಿಸಲಾಗಿದೆ ಎಂದು ಹೇಳಲಾಗಿದೆ.