ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ತಡೆಯುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ವಹಿಸಲು ಸರ್ಕಾರ ಮುಂದಾಗಿದ್ದು, ರಾಜ್ಯದಲ್ಲೆಡೆ ವೀಕೆಂಡ್ ಕರ್ಫ್ಯೂ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಆಗಸ್ಟ್ 23 ರಿಂದ 9 ರಿಂದ 12 ನೇ ತರಗತಿ ಶಾಲೆ, ಕಾಲೇಜುಗಳನ್ನು ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಇದರ ಬಗ್ಗೆಯೂ ಸಿಎಂ ನೇತೃತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಅಲ್ಲದೆ, ಕೇರಳ ಮತ್ತು ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದು, ಬೆಂಗಳೂರು ಸೇರಿದಂತೆ ಕೋವಿಡ್ ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಕಠಿಣ ಕ್ರಮ ಕೈಗೊಳ್ಳುವ ಕುರಿತು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ತಜ್ಞರ ಸಮಿತಿ ಸಲಹೆ ಆಧರಿಸಿ ಕಠಿಣ ನಿರ್ಬಂಧ, ವೀಕೆಂಡ್ ಕರ್ಫ್ಯೂ ಜಾರಿ ಮಾಡುವ ಕುರಿತಾಗಿ ತೀರ್ಮಾನ ಕೈಗೊಳ್ಳಲಾಗುವುದು ಎನ್ನಲಾಗಿದೆ.