ಬೆಂಗಳೂರು: ಮೊದಲ ಹಂತದ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ಕೈತಪ್ಪಿರುವ ಬೆನ್ನಲ್ಲೇ ಮತ್ತೊಮ್ಮೆ ಸಚಿವ ಸ್ಥಾನಕ್ಕಾಗಿ ಶಾಸಕ ಎಸ್.ಎ. ರಾಮದಾಸ್ ಕಸರತ್ತು ನಡೆಸಿದ್ದು, ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಸಿಎಂ ಬೊಮ್ಮಾಯಿ ಭೇಟಿ ಬಳಿಕ ಮಾತನಾಡಿದ ರಾಮದಾಸ್, ಮುಖ್ಯಮಂತ್ರಿಗಳಿಗೆ ಮುಚ್ಚಿದ ಲಕೋಟೆ ಕೊಟ್ಟಿದ್ದೇನೆ. ನನ್ನ ಕೆಲಸದ ಅನುಭವಗಳು ಅದರಲ್ಲಿದೆ. ಸಮಯ ಇರುವಾಗ ಓದಿ ಎಂದು ಹೇಳಿದ್ದೇನೆ ಎಂದರು.
ಪೊಲೀಸ್ ಇಲಾಖೆ ನೇಮಕಾತಿ ಬಗ್ಗೆ ಸಿಹಿ ಸುದ್ದಿ: ಕ್ರೀಡಾಪಟುಗಳಿಗೆ ಶೇ. 2 ರಷ್ಟು ಮೀಸಲು
ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಶಾಸಕ ರಾಮದಾಸ್ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗದಿರುವುದು ಅಸಮಾಧಾನಕ್ಕೆ ಕಾರಣವಾಗಿದ್ದು, ಈ ನಿಟ್ಟಿನಲ್ಲಿ ಇಂದು ಸಿಎಂ ಭೇಟಿಯಾಗಿ ಚರ್ಚಿಸಿದ್ದಾರೆ ಎನ್ನಲಾಗಿದೆ.