ಬೆಂಗಳೂರು: ರಾಜ್ಯದಲ್ಲಿ 9, 10 ಮತ್ತು ಪಿಯುಸಿ ತರಗತಿಗಳನ್ನು ಆರಂಭಿಸಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೋವಿಡ್ ನಿರ್ವಹಣೆ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.
ಆಗಸ್ಟ್ 23 ರಿಂದ ಪಾಸಿಟಿವಿಟಿ ಕಡಿಮೆ ಇರುವ ಜಿಲ್ಲೆಗಳಲ್ಲಿ 9 ರಿಂದ 12 ನೇ ತರಗತಿ ಆರಂಭಿಸಲಾಗುತ್ತದೆ. ಶಾಲೆ ಶುರುವಾದ ನಂತರ ಪಾಸಿಟಿವಿಟಿ ದರ ಶೇಕಡ ಎರಡಕ್ಕಿಂತ ಜಾಸ್ತಿ ಆದರೆ, ಒಂದು ವಾರ ಶಾಲೆ ಬಂದ್ ಮಾಡಲಾಗುವುದು.
ಗಡಿ ಜಿಲ್ಲೆ, ಸೋಂಕು ಹೆಚ್ಚಾಗಿರುವ ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಆಗಸ್ಟ್ 23 ರಿಂದ ಶಾಲೆ, ಕಾಲೇಜ್ ಗಳನ್ನು ಆರಂಭಿಸಲಾಗುವುದು. ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು, ಹಾಸನ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಶಾಲೆ ಆರಂಭಿಸುವುದಿಲ್ಲ.