ಬೆಂಗಳೂರು: 75 ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿ ಶಾಲೆಯಲ್ಲಿ ಧ್ವಜಾರೋಹಣ ಮಾಡಲು ಕಂಬ ನೆಡುವಾಗ ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಂತಾಪ ಸೂಚಿಸಿದ್ದಾರೆ. ಇದೇ ವೇಳೆ ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳ ಚಿಕಿತ್ಸಾ ವೆಚ್ಚ ಭರಿಸುವುದಾಗಿ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ತುಮಕೂರು ಜಿಲ್ಲೆ ಕರೀಕೆರೆ ಎಂಬಲ್ಲಿ ಶಾಲೆಯಲ್ಲಿ ಧ್ವಜಾರೋಹಣ ಮಾಡಲು ಕಂಬ ನೆಡುವಾಗ ವಿದ್ಯುತ್ ಸ್ಪರ್ಶದಿಂದ ಚಂದನ್ ಎಂಬ ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ ಎಂಬ ಸುದ್ದಿ ತಿಳಿದು ಆಘಾತವಾಯಿತು. ಜೊತೆಗೆ ಪವನ್ ಮತ್ತು ಶಶಾಂಕ್ ಎಂಬ ಇನ್ನೂ ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿಯಿತು. ಇದು ಅತ್ಯಂತ ದುರದೃಷ್ಟಕರ ಘಟನೆ ಎಂದು ದುಃಖಿಸಿದ್ದಾರೆ.
ಜಾತಿ ನಿಂದನೆ ಪ್ರಕರಣದಲ್ಲಿ ಖ್ಯಾತ ನಟಿ ಅರೆಸ್ಟ್: ಬಂಧನ ವೇಳೆ ಪೊಲೀಸರು ಕಿರುಕುಳ ನೀಡಿದ್ರು ಎಂದ ನಟಿ ಮೀರಾ ಮಿಥುನ್
ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ನನ್ನ ತೀವ್ರ ಸಂತಾಪಗಳನ್ನು ತಿಳಿಸಲು ಬಯಸುತ್ತೇನೆ. ಅವರ ದುಃಖ ಶಬ್ದಗಳಿಂದ ಶಮನ ಮಾಡಲು ಸಾಧ್ಯವಿಲ್ಲ. ಗಾಯಗೊಂಡ ವಿದ್ಯಾರ್ಥಿಗಳ ಚಿಕಿತ್ಸೆಗೆ ಕೂಡಲೇ ಬೇಕಾದ ಎಲ್ಲ ಸೌಲಭ್ಯ ಒದಗಿಸುವಂತೆ ತಿಳಿಸಿದ್ದೇನೆ. ಈ ಘಟನೆಯ ಬಗ್ಗೆ ಜಿಲ್ಲಾಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ತನಿಖೆ ನಡೆಸಲು ಸೂಚಿಸುತ್ತೇನೆ ಎಂದು ತಿಳಿಸಿದ್ದಾರೆ.