ಹೊಸಪೇಟೆ: ‘ಪಿಕ್ಚರ್ ಅಭಿ ಬಾಕಿ ಹೈ’ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿರುವ ಸಚಿವ ಆನಂದ್ ಸಿಂಗ್ ಇಂದು ರಾಜಿನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಖಾತೆ ಬದಲಾವಣೆಗೆ ಪಟ್ಟು ಹಿಡಿದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚಿಸಿದ್ದ ಅವರು ನೂತನ ವಿಜಯನಗರ ಜಿಲ್ಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ನೆರವೇರಿಸಲು ಹೊಸಪೇಟೆಗೆ ಆಗಮಿಸಿದ್ದರು.
ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ಇವತ್ತು ಸ್ವಾತಂತ್ರ್ಯ ದಿನಾಚರಣೆ. ನನ್ನನ್ನು ಸ್ವತಂತ್ರವಾಗಿರಲು ಬಿಡಿ. ನಾಳೆ ಮಾತನಾಡುತ್ತೇನೆ. ಪಿಚ್ಚರ್ ಅಭಿ ಬಾಕಿ ಹೈ ಎಂದು ಹೇಳಿದ್ದಾರೆ. ಹೀಗೆ ಹೇಳುವ ಮೂಲಕ ಆನಂದ್ ಸಿಂಗ್ ಕುತೂಹಲ ಕಾಯ್ದುಕೊಂಡಿದ್ದಾರೆ. ಖಾತೆ ಬದಲಾವಣೆಗೆ ಪಟ್ಟು ಹಿಡಿದಿರುವ ಅವರು ಖಾತೆ ಬದಲಾವಣೆ ಮಾಡದಿದ್ದರೆ ರಾಜೀನಾಮೆ ನೀಡಬಹುದು ಎಂದು ಹೇಳಲಾಗಿದೆ.