alex Certify GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಕುಸಿತ; 24 ಗಂಟೆಯಲ್ಲಿ ಪತ್ತೆಯಾದ ಸೋಂಕಿತರೆಷ್ಟು ಗೊತ್ತಾ…..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಕುಸಿತ; 24 ಗಂಟೆಯಲ್ಲಿ ಪತ್ತೆಯಾದ ಸೋಂಕಿತರೆಷ್ಟು ಗೊತ್ತಾ…..?

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಕುಸಿತ ಕಂಡಿದ್ದು, ಮೂರನೇ ಅಲೆ ಆತಂಕದ ನಡುವೆ ನಿಟ್ಟುಸಿರು ಬಿಡುವಂತಾಗಿದೆ. ಕಳೆದ 24 ಗಂಟೆಯಲ್ಲಿ 32,937 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 417 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 431642 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 381947 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 35909 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 31411924 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 11,81,212 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 17,43,114 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 54,58,57,108 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...